
ಉದಯವಾಹಿನಿ, : ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ (TVK) ಪಕ್ಷದ ಅಧ್ಯಕ್ಷ, ನಟ ವಿಜಯ ದಳಪತಿ ಸಿಬಿಐ ಎದುರು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು 7 ಗಂಟೆಗೂ ಹೆಚ್ಚು ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿಜಯ್‌ಗೆ ಸಿಬಿಐ ಅಧಿಕಾರಿಗಳು ಸುಮಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಸುಮಾರು ಏಳು ತಾಸಿಗೂ ಅಧಿಕ ಕಾಲ ನಿರಂತರವಾಗಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ವಿಜಯ್ ಕಾಲ್ತುಳಿತಕ್ಕೆ ತಮ್ಮ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರು ಕಾರಣರಲ್ಲ. ಜೊತೆಗೆ ಕಾಲ್ತುಳಿತದ ಬಳಿಕವೂ ನಾನು ಅಲ್ಲೇ ಇರುವುದು ಇನ್ನಷ್ಟು ಜನರಿಗೆ ತೊಂದರೆಯಾಗಬಹುದು ಅಥವಾ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂಬ ಕಾರಣಕ್ಕೆ ನಾನು ಅಲ್ಲಿಂದ ತೆರಳಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದೇ ವೇಳೆ ವಿಜಯ್ ಕೊಟ್ಟ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿದ್ದಾರೆ. ವಿಜಯ್ ಆಗಮನದ ಹಿನ್ನೆಲೆ ಸಿಬಿಐ ಕಚೇರಿ ಎದುರು ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಆದಾಗ್ಯೂ, ವಿಜಯ್ ಅಭಿಮಾನಿಗಳು ಪ್ರತಿಭಟನೆ ಮಾಡಿ, ಗೊಂದಲ ಸೃಷ್ಟಿಪಡಿಸಿದರು. ವಿಚಾರಣೆಗೆ ಹಾಜರಾಗಲು ಟಿವಿಕೆ ವಿಜಯ್ ಸೋಮವಾರ (ಸುಮಾರಿಗೆ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ಆಗಮಿಸಿದರು.
