ಉದಯವಾಹಿನಿ, ಬೆಂಗಳೂರು: ಶಿಡ್ಲಘಟ್ಟದಲ್ಲಿ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಅವಾಜ್ ಹಾಕಿರೋ ಪ್ರಕರಣದಲ್ಲಿ ಕೂಡಲೇ ಆರೋಪಿಯನ್ನ ಬಂಧಿಸಬೇಕು ಅಂತ ಜೆಡಿಎಸ್ ಸರ್ಕಾರವನ್ನು ಆಗ್ರಹ ಮಾಡಿದೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಕರ್ನಾಟಕ ಕಾಂಗ್ರೆಸ್ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
