ಉದಯವಾಹಿನಿ, ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಜ.12ರ ಸಂಜೆ ಅಂಗಡಿಯಲ್ಲಿ ವರ್ತಕರಿಗೆ ವಸ್ತುಗಳನ್ನು ನೀಡುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅಂಗಡಿಯಲ್ಲಿದ್ದ ಅವರ ಪುತ್ರ ಪ್ರವೀಣ್ ಅವರ ಎದೆಯನ್ನು ಒತ್ತಿದ್ದಾನೆ. ಆದರೆ ಪ್ರವೀಣ್ ತಮ್ಮ ಅಂಗಡಿಯಲ್ಲೇ ಉಸಿರು ಚೆಲ್ಲಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಪ್ರವೀಣ್ ಪತ್ನಿ ಸಾವನ್ನಪ್ಪಿದ್ದು, ಇದೀಗ ಪ್ರವೀಣ್ ಕೂಡ ಧಿಡೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪೋಷಕರನ್ನು ಕಳೆದುಕೊಂಡು ಒಬ್ಬನೇ ಪುತ್ರ ಅನಾಥವಾಗಿದ್ದಾನೆ. ಪ್ರವೀಣ್ ಕುಸಿದು ಬಿದ್ದು ಸಾವನ್ನಪ್ಪುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
