ಉದಯವಾಹಿನಿ, ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿ ಸೇರಿದ್ದಾರೆ. ಈ ಶರಣಾಗತಿಯಲ್ಲಿ ಗೊಗುಂಡಾ ಪ್ರದೇಶದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜದೂರ್ ಸಂಘಟನೆಯ ನಾಯಕ ಪೊಡಿಯಂ ಬುದ್ರಾ ಸೇರಿದ್ದಾರೆ. ಇವರ ಮೇಲೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.
ಡಿಎಕೆಎಂಎಸ್ ಸದಸ್ಯರು, ಮಿಲಿಷಿಯಾ ಸಿಬ್ಬಂದಿ ಹಾಗೂ ಜನತಾನಾ ಸರ್ಕಾರ್‌ನ ಕಾರ್ಯಕರ್ತರು ಈ ಗುಂಪಿನಲ್ಲಿದ್ದರು. ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾನ್ ಅವರು ಮಾತನಾಡಿ, ರಾಜ್ಯ ಸರ್ಕಾರದ ಪೂನಾ ಮಾರ್ಗೆಂ ಯೋಜನೆಯಡಿ ಈ ಶರಣಾಗತಿ ನಡೆದಿದೆ. ಗೊಗುಂಡಾದಲ್ಲಿ ಇತ್ತೀಚೆಗೆ ಸ್ಥಾಪಿಸಲಾದ ಭದ್ರತಾ ಕ್ಯಾಂಪ್‌ನಿಂದ ತೀವ್ರ ಆ್ಯಂಟಿ-ನಕ್ಸಲ್ ಕಾರ್ಯಾಚರಣೆಗಳು, ಶೋಧ ಕಾರ್ಯಾಚರಣೆಗಳು ನಡೆದಿವೆ. ಇದರಿಂದ ಮಾವೋವಾದಿಗಳ ಬೆಂಬಲ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಅವರು ಹೇಳಿದರು.
ಗೊಗುಂಡಾದ ದಟ್ಟ ಕಾಡು ಮತ್ತು ದುರ್ಗಮ ಪ್ರದೇಶ ಒಂದು ಕಾಲದಲ್ಲಿ ಮಾವೋವಾದಿಗಳ ದರ್ಭಾ ವಿಭಾಗಕ್ಕೆ ಸುರಕ್ಷಿತ ಆಶ್ರಯವಾಗಿತ್ತು. ಆದರೆ, ಹೊಸ ಭದ್ರತಾ ಕ್ಯಾಂಪ್‌ನಿಂದ ಒತ್ತಡ ಹೆಚ್ಚಾದ ನಂತರ ಈ ಶರಣಾಗತಿಗಳು ಸಾಧ್ಯವಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!