ಉದಯವಾಹಿನಿ, ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ ಸಹ ನಾಗರಿಕರೇ, ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆಂದು ತಿಳಿಸಿದ್ದಾರೆ.ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯ ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ.
ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನಮಾನ ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ.

Leave a Reply

Your email address will not be published. Required fields are marked *

error: Content is protected !!