ಉದಯವಾಹಿನಿ, ಮುಂಬೈ: 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರನ್ ಮಿಷಿನ್ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 37ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.ಇಂದು ಬಿಡುಗಡೆಯಾದ ನೂತನ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ 785 ಅಂಕ ಪಡೆಯುವ ಮೂಲಕ ಅಗ್ರಸ್ಥಾನಕ್ಕೆ ಜಿಗಿದಿದ್ದಾರೆ. ʼ2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ಬಳಿಕ ಟಾಪ್ 11 ರಲ್ಲಿ ಹಲವು ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ನಂ.1 ಪಟ್ಟಕ್ಕೇರಿದ್ದಾರೆ.
2013ರಲ್ಲಿ ಮೊಟ್ಟ ಮೊದಲ ಬಾರಿಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, 2018ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪುನಃ ಅಗ್ರಸ್ಥಾನಕ್ಕೆ ಜಿಗಿದಿದ್ದರು. ಆ ಬಳಿಕ ಟಾಪ್ 11 ರಲ್ಲಿ ಹಲವು ಸ್ಥಾನಗಳಲ್ಲಿದ್ದ ಕೊಹ್ಲಿ 5 ವರ್ಷಗಳ ಬಳಿಕ ನಂ.1 ಪಟ್ಟಕ್ಕೇರಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಡಕೌಟ್ ಆಗಿದ್ದರು. ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇನ್ನೂ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 2 ಶತಕ, 1 ಅರ್ಧಶತಕ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ರು. ಇದೀಗ ಕಿವೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 91 ಎಸೆತಗಳಲ್ಲಿ 93 ರನ್ ಗಳಿಸಿದ್ದರು. ಈ ಮೂಲಕ 785 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.
