ಉದಯವಾಹಿನಿ , ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯ ನೋಡಲು ಭಕ್ತ ಸಾಗರವೇ ಗಂಗಾಧರೇಶ್ವರನ ಸನ್ನಿಧಿಯಲ್ಲಿ ನೆರೆದಿರುತ್ತದೆ. ಈ ಸಂದರ್ಭದಲ್ಲಿ ಪ್ರಕೃತಿಯ ವಿಸ್ಮಯಕ್ಕೆ ಸನ್ನಿಧಾನ ಸಾಕ್ಷಿಯಾಗಿದೆ. ಗವಿಗಂಗಾಧರೇಶ್ವರನಿಗೆ ಸಂಜೆ 5 ಗಂಟೆ 2 ನಿಮಿಷಕ್ಕೆ ಸೂರ್ಯ ರಶ್ಮಿಯ ಸ್ಪರ್ಶವಾಗಬೇಕಿತ್ತು. ಆದ್ರೆ ಸಮಯದಲ್ಲಿ ಬದಲಾವಣೆಯಾಯಿತು. 5 ಗಂಟೆ 17 ನಿಮಿಷದಿಂದ ಶಿವಲಿಂಗಕ್ಕೆ ಭಾಸ್ಕರನ ಸ್ಪರ್ಶವಾಗಲು ಶುರುವಾಯಿತು. ಮೊದಲು ದೇಗುಲದ ಹಂಸ ದ್ವಾರದ ಮೂಲಕ ನಂದಿಯನ್ನ ಸ್ಪರ್ಶಿಸಿದ ಭಾಸ್ಕರ ಬಳಿಕ ನಂದಿಯ ಕೊಂಬಿನ ಮೂಲಕ ಹಾದುಹೋಗಿ ಈಶ್ವರನ ಪೀಠ ಸ್ಪರ್ಶಿಸಿದ್ದಾನೆ, ನಂತರ ನಿಧಾನವಾಗಿ ಶಿವಲಿಂಗ ಸ್ಪರ್ಶಿಸಿದ್ದಾನೆ. ಈ ವಿಸ್ಮಯವನ್ನ ಭಕ್ತಗಣ ಕಣ್ತುಂಬಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!