ಉದಯವಾಹಿನಿ , ಬೆಂಗಳೂರು: 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಜ.19 ರಿಂದ 23ರ ವರೆಗೆ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆಗೆ ತೆರಳಲು ಸಿದ್ಧವಾಗುತ್ತಿರುವುದಕ್ಕೆ ಪೂರ್ವಭಾವಿಯಾಗಿ ಸಚಿವರು ಕಳೆದ ಒಂದು ವರ್ಷದಲ್ಲಿ ರಾಜ್ಯದ ಕೈಗಾರಿಕಾ ಕ್ಷೇತ್ರದ ವಿವಿಧ ವಲಯಗಳಲ್ಲಿ ಆಗಿರುವ ಹೂಡಿಕೆ, ಅರ್ಜಿ ಸಲ್ಲಿಕೆ ಮುಂತಾದ ಪ್ರಗತಿಯ ಅಂಕಿ-ಅಂಶಗಳನ್ನು ನೀಡಿದ್ದಾರೆ.
