ಉದಯವಾಹಿನಿ ,ಢಾಕಾ : ಆಂತರಿಕ ಸಂಘರ್ಷದಲ್ಲಿ ನಲುಗಿರುವ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಹಿಂದೂ ಶಿಕ್ಷಕರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ. ದಾಳಿಕೋರರು ರಾತ್ರಿ ವೇಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಉಟುಂಬ ಸದಸ್ಯರು ಸುರಕ್ಷಿತವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶಿಕ್ಷಕ ಬೀರೇಂದ್ರ ಕುಮಾರ್ ಎಂದು ಗುರುತಿಸಿಕೊಳ್ಳಲಾಗಿದೆ. ಘಟನೆಯ ವಿಡಿಯೊ ವೈರಲ್ ಆಗಿದೆ.
ಈಗಾಗಲೇ ಬಾಂಗ್ಲಾದಲ್ಲಿ ಹಲವು ಹಿಂದೂಗಳನ್ನು ಬೆಂಕಿ ಹಚ್ಚಿ ಹತ್ಯೆಗೈದ ಘಟನೆಗಳು ಬೆಳಕಿಗೆ ಬಂದಿದೆ. ಇತ್ತೀಚೆಗೆ ಹಿಂದೂ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮತ್ತು ಹಿಂದೂ ವಿಧವಾ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರವೆಸಗಿದ ಹೀನ ಘಟನೆಗಳು ನಡೆದಿತ್ತು.
ಫೆ.12ರಂದು ಬಾಂಗ್ಲಾದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಈ ಹಿಂದೆ ಶೇಖ್ ಹಸೀನಾ ಸ್ಪರ್ಧಿಸಿದ್ದ ಗೋಪಲ್‌ಗಂಜ್-2 ಕ್ಷೇತ್ರದಿಂದ ಸ್ಪರ್ಧಿಸಲು ಜತಿಯಾ ಹಿಂದೂ ಮಹಾಜೋತ್ ಎನ್ನುವ ಹಿಂದೂ ಸಂಘಟನೆ ಪ್ರಧಾನ ಕಾರ್ಯದರ್ಶಿ ಗೋವಿಂದ್ ಚಂದ್ರ ಪ್ರಾಮಾಣಿಕ್ ಎನ್ನುವವರು ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣಾ ಆಯೋಗ ಕೊನೆ ಕ್ಷಣದಲ್ಲಿ ಪ್ರಮಾಣಿಕ್ ಅವರು ನಾಮಪತ್ರದಲ್ಲಿ ಸಲ್ಲಿಸಿರುವ ಮತದಾರರ ಸಹಿ ಅಮಾನ್ಯವೆಂದು ಉಮೇದುವಾರಿಕೆ ರದ್ದುಗೊಳಿಸಿದೆ.
