ಉದಯವಾಹಿನಿ, ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಶಾಂತಪ್ಪ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಶಾಂತಪ್ಪ ಕಾರು ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡ ಹಿನ್ನೆಲೆ ಕಾರು ಪಲ್ಟಿ ಹೊಡೆದು ಮೃತಪಟ್ಟಿದ್ದಾರೆ. ಮಾರೆಪ್ಪ, ಶಿನು ಪವಾರ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವದುರ್ಗದ ಮರಗಮದಿಬ್ಬಿ ತಾಂಡದವರಾದ ಮೂವರು ಅರಕೇರಾದಿಂದ ಸಿರವಾರಕ್ಕೆ ಹೊರಟಿದ್ದ ವೇಳೆ ಕಾರು ಪಲ್ಟಿಯಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
