ಉದಯವಾಹಿನಿ, ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪ್ರಾರ್ಥನೆ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ ಕೊಹ್ಲಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ಅವರು ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 93 ರನ್ ಗಳಿದ್ದರು.
ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ ಸರಣಿ ಈಗ 1-1 ರಲ್ಲಿ ಸಮಬಲಗೊಂಡಿದ್ದು, ಜನವರಿ 18 ರಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೊಹ್ಲಿ ದೈವಿಕ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಕೊಹ್ಲಿ ದೇವಾಲಯದ ಒಳಗೆ ‘ಜೈ ಶ್ರೀ ಮಹಾಕಾಲ್’ ಎಂದು ಜಪಿಸುವ ಮೂಲಕ ಸರ್ವಶಕ್ತ ಶಿವನನ್ನು ಸ್ತುತಿಸುತ್ತಾ ಪುರೋಹಿತರ ಜೊತೆಗೆ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಜುಲೈ 2021 ರ ನಂತರ ಮೊದಲ ಬಾರಿಗೆ ಐಸಿಸಿ ಪುರುಷರ ODI ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅವರನ್ನು ಮತ್ತೆ ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ.
