ಉದಯವಾಹಿನಿ, ಮೈಸೂರು: ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ, ಅವ್ರೇನು ನಮ್ಗೆ ಪಾಠ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನ ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದು ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ನಾನು, ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆವು. ಆಗ ನಮಗೆ ಪ್ರಚಾರಕ್ಕೆ ಕೂಡ ಜಾಗ ಕೊಡಲಿಲ್ಲ. ಕೊನೆಗೆ ನಾವು ಕುರುಬರ ದೇವಸ್ಥಾನಲ್ಲಿ ನಿಂತು ಪ್ರಚಾರ ಮಾಡಿ ಬಂದಿದೆ. ಇಂತಹ ರೆಡ್ಡಿ ನಮಗೇನು ಪಾಠ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಳ್ಳಾರಿಯಲ್ಲಿ ಗಲಾಟೆಯನ್ನ ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹದ ಬಗ್ಗೆ ಮಾvನಾಡಿ, ಸಿಬಿಐಗೆ ವಹಿಸಿ ಎಂದು ಕೇಳುವ ನೈತಿಕತೆ ಬಿಜೆಪಿಗೆ ಎಲ್ಲಿದೆ? ನನ್ನ ಅವಧಿಯಲ್ಲಿ ನಾನು ಏಳೆಂಟು ಕೇಸ್‌ಗಳನ್ನ ಸಿಬಿಐ ಕೊಟ್ಟಿದ್ದೇನೆ. ಆದರೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಕೇಸ್‌ನ್ನ ಸಿಬಿಐಗೆ ಕೊಟ್ಟಿದ್ದಾರಾ ಹೇಳಲಿ. ಬಿಜೆಪಿಯವರಿಗೆ ಸಂಸ್ಕಾರ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿ ವಿಚಾರವಾಗಿ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು.ನಾವು ಯಾರ ರಕ್ಷಣೆಯನ್ನ ಮಾಡುವುದಿಲ್ಲ. ಆಡಿಯೋದಲ್ಲಿ ಸಚಿವರ ಹೆಸರು ಬಂದಿರುವುದು ನನಗೆ ಗೊತ್ತಿಲ್ಲ. ಬಿಜೆಪಿ ಅವಧಿಯಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದು ಗುತ್ತಿಗೆದಾರರು, ನಾನ್ನಲ್ಲ. ಇವರೇನು ನನ್ನ ಮೇಲೆ ಆರೋಪ ಮಾಡ್ತಾರೆ ಎಂದು ಆಗ್ರಹಿಸಿದ್ದಾರೆ.
