ಉದಯವಾಹಿನಿ, ಮುಂಬೈ
: ದೇಶದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಬಾರಿ ಮಳೆಯಿಂದ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಇರ್ಶಲ್ವಾಡಿ ಬುಡಕಟ್ಟು ಕುಗ್ರಾಮದಲ್ಲಿ ಭೂಕುಸಿತದಿಂದ ಸತ್ತರವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.78 ಕ್ಕೂ ಹೆಚ್ಚು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಪರಿಹಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ನಡುವೆ ಮಹಾರಾಷ್ಟ್ರದ ಪಾಲ್ಘರ್, ಥಾಣೆ, ರಾಯಗಡ್, ರತ್ನಾಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಮತ್ತು ಮುಂಬೈಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ನೀಡಿದ್ದು ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ಭೂಕುಸಿತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಮುಖ್ಯಮಂತ್ರಿಗಳು ದತ್ತು ಪಡೆಯಲಿದ್ದಾರೆ ಎಂದು ಶಿವಸೇನೆ ಘೋಷಿಸಿದೆ.
