ಉದಯವಾಹಿನಿ,: ಬೆಂಗಳೂರು: ಬಿಗ್ ಬಾಸ್ ಸೀಜನ್ -12 ಗ್ರಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದೆ.
ಅಂತಿಮವಾಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿರುವ ಆರು ಸ್ಪರ್ಧಿಗಳಲ್ಲಿ ಗೆಲುವಿನ ಕಿರೀಟ ಯಾರಾಪಾಲಾಗಲಿದೆ ಎಂಬುದು ಕೆಲವೇ ಸಮಯದಲ್ಲಿ ಗೊತ್ತಾಗಲಿದೆ. ತಮ್ಮ ನೆನ್ನಿಚ್ಚಿನ ಸ್ಪರ್ಧಿಗಳಿಗಾಗಿ ಅಭಿಮಾನಿಗಳು ವಿಶೇಷ ಪೂಜೆ, ಪುನಸ್ಕಾರ, ಪ್ರಾರ್ಥನೆಗಳಲ್ಲಿ ತೊಡಗಿದ್ದಾರೆ.
ಇನ್ನೊಂದೆಡೆ ಬಿಗ್ ಬಾಸ್ ಮನೆಯ ಹೊರ ಭಾಗದಲ್ಲಿ ಸ್ಪರ್ಧಿಗಳ ಬೃಹತ್ ಕಟೌಟ್, ಬ್ಯಾನರ್ ಗಳನ್ನು ಅಳವಡಿಸಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಇಂದು ಬಿಗ್ ಬಾಸ್ ಸೀಜನ್ -12ರ ಗ್ರಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಬಳಿ ಜನರು ಜಮಾಣೆಗೊಳ್ಳುತ್ತಿದ್ದಾರೆ. ಮತ್ತೊಂದೆಡೆ ಬಿಗ್ ಬಾಸ್ ಸ್ಪರ್ಧಿಗಳ ಕಟೌಟ್, ಬ್ಯಾನರ್, ಫೋಟೋಗಳನ್ನು ಹಿಡಿದು ಸ್ಟುಡಿಯೋದತ್ತ ಅಭಿಮಾನಿಗಳು ಮುನ್ನುಗ್ಗುತ್ತಿದ್ದಾರೆ. ಗ್ರಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಜಾಲಿವುಡ್ ಸ್ಟುಡಿಯೋ ಸುತ್ತಮುತ್ತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಜಾಲಿವುಡ್ ಸ್ಟುಡಿಯೋ ಬಳಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಲು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.
ಈಬಾರಿ ಬಿಗ್ ಬಾಸ್ ನಲ್ಲಿ ಗಿಲ್ಲಿ ಗೆಲ್ಲಬೇಕು ಎಂದು ಕರುನಾಡಿನಾದ್ಯಂತ ಜನರು ಹಾರೈಸುತ್ತಿದ್ದಾರೆ. ಬೆಂಗಳೂರಿನ ಅಣ್ಣಮ್ಮ ದೇವಸ್ಥಾನದಲ್ಲಿ ಗಿಲ್ಲಿ ಅಭಿಮಾನಿಗಳು, ಗಿಲ್ಲಿ ಗೆಲುವಿಗಾಗಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಅಶ್ವಿನಿ ಗೌಡ ಗೆಲ್ಲಬೇಕು ಎಂದು ರಕ್ಷಣಾ ವೇದಿಕೆಯ ಕೆಲ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಉಳಿದಿರುವ ಕೊನೆಯ ಆರು ಸ್ಪರ್ಧಿಗಳಾದ ಗಿಲ್ಲಿ, ಅಶ್ವಿನಿ ಗೌಡ, ಧನುಷ್, ರಘು, ಕಾವ್ಯಾ, ರಕ್ಷಿತಾ ಶೆಟ್ಟಿ ಇವರಲ್ಲಿ ಬಿಗ್ ಬಾಸ್-12ರ ಕಿರೀಟ ಯಾರ ಮುಡಿಗೇರಲ್ಲೆ ಈ ಬಾರಿ ವಿನ್ನರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೆಲವೇ ಸಮಯದಲ್ಲಿ ತೆರೆ ಬೀಳಲಿದೆ.
