ಉದಯವಾಹಿನಿ,: ಇಂದೋರ್: ಇಲ್ಲಿನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದವು. ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಕಾಯ್ದುಕೊಂಡಿರುವುದರಿಂದ ಈ ಪಂದ್ಯ ಎರಡೂ ತಂಡಗಳಿಗೂ ನಿರ್ಣಾಯಕವಾಗಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಪ್ರವಾಸಿ ನ್ಯೂಜಿಲೆಂಡ್ ತಂಡ 337 ರನ್ ಗಳ ಬೃಹತ್ ಮೊತ್ತ ಕಲೆಹಾಕುವಲ್ಲಿ ಡ್ಯಾರಿಲ್ ಮಿಚೆಲ್ ಅವರ ಪಾತ್ರ ಮಹತ್ವದ್ದಾಗಿದೆ. 131 ಎಸೆತಗಳಲ್ಲಿ 15 ಫೋರ್ ಹಾಗೂ ಮೂರು ಸಿಕ್ಸರ್ ಗಳೊಂದಿಗೆ ಬರೋಬ್ಬರಿ 137 ರನ್ ಬಾರಿಸಿ ತಂಡಕ್ಕೆ ನೆರವಾದರು. ಇದಲ್ಲದೆ, ಮಿಚೆಲ್ ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.
ಭಾರತದ ಅವರು 8 ಇನಿಂಗ್ಸ್‌ಗಳನ್ನಾಡಿದ್ದು, ಅದರಲ್ಲಿ ನಾಲ್ಕು ಶತಕ ಬಾರಿಸಿದ್ದಾರೆ. ಆ ಮೂಲಕ ಅವರು ಏಕದಿನ ಕ್ರಿಕೆಟ್‌ನಲ್ಲಿ ಭಾರತದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಪ್ರವಾಸಿ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮೊದಲ ಸ್ಥಾನದಲ್ಲಿ ಐದು ಶತಕಗಳೊಂದಿಗೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಇದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಒಟಿಐ ಶತಕ ಬಾರಿಸಿದವರು
ಎಬಿ ಡಿ ವಿಲಿಯರ್ಸ್: 5 ಶತಕಗಳು
ಡ್ಯಾರಿಲ್ ಮಿಚೆಲ್: 4 ಶತಕಗಳು
ಕ್ವಿಂಟನ್ ಡಿ ಕಾಕ್: 3 ಶತಕಗಳು
ಕ್ರಿಸ್ ಗೇಲ್-: 3 ಶತಕಗಳು
ರಿಕಿ ಪಾಂಟಿಂಗ್: 3 ಶತಕಗಳು
ಸಲ್ಮಾನ್ ಬಟ್: 3 ಶತಕಗಳು
ಮಾರ್ಲನ್ ಸ್ಯಾಮುಯೆಲ್ಸ್: 3 ಶತಕಗಳು
