ಉದಯವಾಹಿನಿ, ಧಾರವಾಡ: ಹುಬ್ಬಳ್ಳಿಯಲ್ಲಿ ಜ.24ರಂದು ವಸತಿ ಇಲಾಖೆಯಿಂದ 3000 ಮನೆಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ 1800 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಲಿದ್ದು, ಈ ವಿಷಯವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಅವರು ಧಾರವಾಡ ಜಿಲ್ಲಾ ಹಂತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಂಟಿ ಸಭೆ ನಡೆಸಿದ ಜಮೀರ್, ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಸುಮಾರು 4,600 ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಅಧಿಕಾರಿಗಳ ವ್ಯವಸ್ಥಿತ ರೂಪುರೇಷೆ ಸಿದ್ಧಪಡಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.

ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಸುಮಾರು 2 ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಒಟ್ಟು 42,000 ಮನೆಗಳ ಪೈಕಿ 1,008 ಮನೆಗಳನ್ನು ಹುಬ್ಬಳ್ಳಿಯಲ್ಲಿ ಕೊಡುತ್ತಿದ್ದೇವೆ. ತುಮಕೂರಿನಲ್ಲಿ 1,000, ಬಳ್ಳಾರಿಯಲ್ಲಿ 2,500 ಯಾದಗಿರಿಯಲ್ಲಿ 1,000ಮನೆಗಳಿವೆ. ಆಯಾ ಜಿಲ್ಲೆಗಳಲ್ಲಿ ಜ.24 ರಂದು ಮನೆಗಳ ಹಸ್ತಾಂತರ ನಡೆಯಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!