ಉದಯವಾಹಿನಿ, ಬೆಂಗಳೂರು : ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದಾರೆ.
ರನ್ಯಾರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಹೆಸರು ದೊಡ್ಡ ಮಟ್ಟದಲ್ಲಿ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು.ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರವಾಗಿದೆ. ಈ ಹಿನ್ನಲೆಯಲ್ಲಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ ನೀಡಿದ್ದು, ವರದಿ ಬಂದ ಕೂಡಲೇ ರಾಮಚಂದ್ರರಾವ್ ಮೇಲೆ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ.
