ಉದಯವಾಹಿನಿ, ರಾಮನಗರ: ಹೆದ್ದಾರಿಯಲ್ಲಿ ಲಾರಿ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ನಕಲಿ ಗನ್ ತೋರಿಸಿ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಕುಣಿಗಲ್ ಮುಖ್ಯ ರಸ್ತೆಯಲ್ಲಿ ಕಾರ್‌ನಲ್ಲಿದ್ದ ಮೂವರು ಯುವಕರು ಲಾರಿ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನಿಗೆ ನಕಲಿ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಇದನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿಕೊಂಡಿದ್ದ ಲಾರಿ ಡ್ರೈವರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು, ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತನಿಂದ ನಕಲಿ ಗನ್ ಕೂಡಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತನಿಂದ ನಕಲಿ ಗನ್ ಕೂಡಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
