ಉದಯವಾಹಿನಿ, ಚಿತ್ರದುರ್ಗ: ಪಡಿತರ ಅಕ್ಕಿಯನ್ನು ಖರೀದಿಸಿ ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ನಗರದ ಪಾವಗಡ ರಸ್ತೆಯ ಗೋದಾಮಿನ ಮೇಲೆ ಚಳ್ಳಕೆರೆ ತಹಶೀಲ್ದಾರ್ ರೆಹನ್ ಪಾಷಾ ಹಾಗೂ ಪಿಎಸ್‌ಐ ಈರೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಕಡಿಮೆ ದರಕ್ಕೆ ಬಡವರಿಂದ ಪಡಿತರ ಅಕ್ಕಿ ಖರೀದಿ ಆರೋಪ ಕೇಳಿಬಂದಿದೆ.
ಅಲ್ಲದೇ, ಪಡಿತರ ಅಕ್ಕಿಗೆ ಪಾಲಿಶ್ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪವಿದ್ದು, ತಹಸೀಲ್ದಾರ್, ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಗೋದಾಮಿನಲ್ಲಿದ್ದ ಅಕ್ಕಿಯನ್ನು ವಶಪಡಿಸಿಕೊಂಡು ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ.
