ಉದಯವಾಹಿನಿ, ಬಳ್ಳಾರಿ: ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ.
ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.
