ಉದಯವಾಹಿನಿ, : ವಿರಾಟ್‌ ಕೊಹ್ಲಿಯ ಶತಕದ ಹೊರತಾಗಿಯೂ ಭಾರತ ತಂಡ, ಮೂರನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 41 ರನ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2 ಅಂತರದಲ್ಲಿ ಸೋಲು ಅನುಭವಿಸಿತು. ಅಂದ ಹಾಗೆ ಮೂರನೇ ಪಂದ್ಯದಲ್ಲಿ ಭಾರತ ತಂಡದ ಸೋಲಿನ ಬಲವಾದ ಕಾರಣವೇನೆಂದು ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಬಹಿರಂಗಪಡಿಸಿದ್ದಾರೆ. ಫೀಲ್ಡಿಂಗ್‌ ವೈಫಲ್ಯದಿಂದಾಗಿ ಭಾರತ ತಂಡದ ಏಕದಿನ ಸರಣಿಯನ್ನು ಕಳೆದುಕೊಂಡಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇಂದೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ನ್ಯೂಜಿಲೆಂಡ್‌ ತಂಡಕ್ಕೆ ಅರ್ಷದೀಪ್‌ ಸಿಂಗ್‌ ಹಾಗೂ ಹರ್ಷಿತ್‌ ರಾಣಾ ಆರಂಭಿಕ ಆಘಾತ ನೀಡಿದ್ದರು. ಡೆವೋನ್‌ ಕಾನ್ವೆ ಹಾಗೂ ಹೆನ್ರಿ ನಿಕೋಲ್ಸ್‌ ಅವರು ಬಹುಬೇಗ ಔಟ್‌ ಆಗಿದ್ದರು. ಆ ಮೂಲಕ ಕಿವೀಸ್‌ ತಂಡ 5 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡಿತ್ತು. ನಂತರ ವಿಲ್‌ ಯಂಗ್‌ ಹಾಗೂ ಡ್ಯಾರಿಲ್‌ ಮಿಚೆಲ್‌ ಅವರು ಮೂರನೇ ವಿಕೆಟ್‌ಗೆ 53 ರನ್‌ಗಳನ್ನು ಕಲೆ ಹಾಕಿ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು. ವಿಲ್‌ ಯಂಗ್‌ 30 ರನ್‌ ಗಳಿಸಿ ಉತ್ತಮ ಆರಂಭ ಪಡೆದ ಬಳಿಕ ವಿಕೆಟ್‌ ಒಪ್ಪಿಸಿದ್ದರು. ನಂತರ ಡ್ಯಾರಿಲ್‌ ಮಿಚೆಲ್‌ ಹಾಗೂ ಗ್ಲೆನ್‌ ಫಿಲಿಪ್ಸ್‌ ಅವರು ತಲಾ ಶತಕಗಳನ್ನು ಬಾರಿಸಿದರು. ಆ ಮೂಲಕ ಕಿವೀಸ್‌ ತನ್ನ ಪಾಲಿನ 50 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 338 ರನ್‌ಗಳನ್ನು ಕಲೆ ಹಾಕಿತ್ತು.

ನಂತರ ಗುರಿ ಹಿಂಬಾಲಿಸಿದ ಭಾರತ ತಂಡ, ವಿರಾಟ್‌ ಕೊಹ್ಲಿ ಶತಕ, ನಿತೀಶ್‌ ರೆಡ್ಡಿ ಹಾಗೂ ಹರ್ಷಿತ್‌ ರಾಣಾ ಅವರ ಅರ್ಧಶತಕಗಳ ಬಲದಿಂದ ಗೆಲುವಿನ ಸನಿಹ ಬಂದು ಆಲ್‌ಔಟ್‌ ಆಗಿತ್ತು. ಆ ಮೂಲಕ ಟೀಮ್‌ ಇಂಡಿಯಾ 41 ರನ್‌ಗಳಿಂದ ಸೋಲು ಅನುಭವಿಸಿತ್ತು. ಅಂತಿಮವಾಗಿ ಟೀಮ್‌ ಇಂಡಿಯಾ ಮೂರನೇ ಪಂದ್ಯವನ್ನು ಸೋತು ಏಕದಿನ ಸರಣಿಯನ್ನು ಕಳೆದುಕೊಂಡಿತು.

Leave a Reply

Your email address will not be published. Required fields are marked *

error: Content is protected !!