ಉದಯವಾಹಿನಿ, ಗದಗ: ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ.
ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ. ಬೇರೆ ಕಡೆ ನಿವೇಶನ ನೀಡಿದರೆ ಮಾತ್ರ ಸ್ಥಳಾಂತರಗೊಳ್ಳುತ್ತೇವೆ, ಇಲ್ಲವಾದರೆ ಸ್ಥಳಾಂತರವಾಗುವುದಿಲ್ಲ ಎಂದು ಕುಟುಂಬ ತಿಳಿಸಿದೆ.
