ಉದಯವಾಹಿನಿ, ಬೆಂಗಳೂರು: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು. ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಸಚಿವ ಬೈರತಿ ಬಸವರಾಜ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಉಪಸ್ಥಿತರಿದ್ದರು. ಈ ಬಾರಿಯ ಬಿಗ್‌ಬಾಸ್‌ನಲ್ಲಿ ಗಿಲ್ಲಿ ಅವರು ವಿಜೇತರಾಗಿದ್ದರೆ ರಕ್ಷಿತಾ ರನ್ನರ್ ಅಪ್, ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.
ಮಂಡ್ಯದ ಮಳವಳ್ಳಿಯ ದಡದಪುರ ಗ್ರಾಮದ ಗಿಲ್ಲಿ ತಮ್ಮ ಮಾತಿನ ಮೋಡಿಯಿಂದ ಕರ್ನಾಟಕದ ಜನರ ಮನಸ್ಸು ಗೆದ್ದಿದ್ದರು. ಅತಿ ಹೆಚ್ಚು ಮತ ಪಡೆಯುವ ಮೂಲಕ ಅರ್ಹವಾಗಿಯೇ ಮೊದಲ ಸ್ಥಾನವನ್ನು ಪಡೆದರು.
