ಉದಯವಾಹಿನಿ, ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಘಟನೆ ಸಂಬಂಧ ಏರ್ ಸಾಟ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಫ್‌.ಡಿ ಆಪ್ಪಾನ್ ಅಹಮದ್ ಎಂಬಾತನನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆಯೊಬ್ಬರು ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದರು. ಮರಳಿ ದಕ್ಷಿಣ ಕೊರಿಯಾಗೆ ತೆರಳಲು ಬೆಂಗಳೂರು ಏರ್‌ಪೋರ್ಟ್‌ಗೆ ವಾಪಸ್‌ ಆಗಿದ್ದರು. ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ಮುಗಿಸಿ ಬೋರ್ಡಿಂಗ್ ಆಗುವ ವೇಳೆ ಎದುರಾದ ಆರೋಪಿ ಮಹಿಳಾ ಪ್ರಯಾಣಿಕರ ಬಳಿ ತಮ್ಮ ಬ್ಯಾಗೇಜ್ ಪರಿಶೀಲನೆ ಮಾಡಬೇಕು ಅಂತ ಹೇಳಿ ಬ್ಯಾಗೇಜ್ ಪರಿಶೀಲನೆ ಮಾಡಿದ್ದಾರೆ.

ನಂತರ ವೈಯಕ್ತಿಕವಾಗಿ ಪರಿಶೀಲರಿಗೆ ಒಳಗಾಗಬೇಕು ಎಂದು ತಿಳಿಸಿ ಈ ಮಹಿಳೆಯನ್ನ ಪುರುಷರ ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಆಕೆಯನ್ನು ಮುಟ್ಟುವ ಹಾಗೂ ತಬ್ಬಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಸಿಐಎಸ್‌ಎಫ್‌ ಸಿಬ್ಬಂದಿಗೆ ತಿಳಿಸಿದ್ದಾಳೆ. ಕೂಡಲೇ ಸಿಐಎಸ್ಎಫ್ ಸಿಬ್ಬಂದಿ ಆರೋಪಿಯನ್ನ ವಶಕ್ಕೆ ಪಡೆದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಮಹಿಳೆಯ ಬಳಿ ದೂರು ಪಡೆದಿರುವ ಪೊಲೀಸರು ಆರೋಪಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಅಸಲಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಅನುಕೂಲ ಹಾಗೂ ಸಹಾಯ ಮಾಡುವ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ ಆರೋಪಿ ಕರ್ತವ್ಯ ದುರಪಯೋಗ ಮಾಡಿಕೊಂಡು ಈಗ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾನೆ.

 

Leave a Reply

Your email address will not be published. Required fields are marked *

error: Content is protected !!