ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಪ್ರೇಮಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಯುವತಿಯ ಸಹೋದರನನ್ನು ಬಂಧಿಸಲಾಗಿದೆ.
27 ವರ್ಷದ ಮುಸ್ಲಿಂ ಯುವಕ ಮತ್ತು 22 ವರ್ಷದ ಹಿಂದೂ ಯುವತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಯುವತಿಯ ಸಹೋದರ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ ಪರಿಚಯವಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಾಜಲ್ ಸಹೋದರರು ಅಂತರ್ಧರ್ಮೀಯ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ.
ಮೂರು ದಿನಗಳ ಹಿಂದೆ ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಜೋಡಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾರೆ. ನಿನ್ನೆ ಸಂಜೆ ಶವಗಳನ್ನು ಹೊರತೆಗೆಯಲಾಗಿದೆ. ಅರ್ಮಾನ್ ಮತ್ತು ಕಾಜಲ್ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.
