ಉದಯವಾಹಿನಿ, ಬೆಂಗಳೂರು: ಫ್ಲೆಕ್ಸ್ ತೆರವು ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಕೆಪಿಸಿಸಿಯಿಂದ ಅಮಾನತು ಮಾಡಲಾಗಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಮಾನತು ಆದೇಶ ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಸಿದ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ತನ್ನ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡು ರಾಜೀವ್ ಗೌಡ ನಾಪತ್ತೆಯಾಗಿದ್ದಾರೆ.
ಸಚಿವ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿತ್ತು. ಘಟನೆಯ ಬಗ್ಗೆ ಕಾರಣ ಕೇಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್ ನೀಡಿದ್ದರು. 7 ದಿನಗಳ ಒಳಗೆ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ಇಲ್ಲವಾದರೆ ಈ ಬಗ್ಗೆ ಶಿಸ್ತು ಸಮಿತಿಯು ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಜಿ.ಸಿ.ಚಂದ್ರಶೇಖರ್ ಎಚ್ಚರಿಸಿದ್ದರು. ಇದೀಗ ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.