
ಉದಯವಾಹಿನಿ ದೇವರಹಿಪ್ಪರಗಿ: ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರನ ಕಾಲು ನುಜ್ಜುಗುಜ್ಜು ಆದ ಘಟನೆ ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಪಟ್ಟಣದ ಭೀಮಪ್ಪ ಸಾರವಾಡ ಎಂಬುವರು ಬೈಕ್ ಮೇಲೆ ಬಸ್ ನಿಲ್ದಾಣದ ಮುಂದೆ ರಾಷ್ಟ್ರೀಯ ಹೆದ್ದಾರಿ-50ಯಲ್ಲಿ ಹೋಗುವಾಗ ಟಿಪ್ಪರ್ ಹೊಡೆದ ಪರಿಣಾಮ ಬೈಕ್ ಸವಾರನ ಕಾಲು ಗಾಲಿಗೆ ಸಿಕ್ಕು ನುಜ್ಜುಗುಜ್ಜು ಆದ ಪರಿಣಾಮ ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.
