ಉದಯವಾಹಿನಿ ಕೋಲಾರ :– ಶೈಕ್ಷಣಿಕವಾಗಿ ಮುಂದುವರಿದರೆ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಕುರುಬ ಸಮುದಾಯಭವನ ಹಾಸ್ಟೆಲ್ ಕಟ್ಟಡಕ್ಕೆ ಸರ್ಕಾರದಿಂದ ೧ ಕೋಟಿ ಬಿಡುಗಡೆಗೆ ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು.ನಗರದ ಕುವೆಂಪು ನಗರದಲ್ಲಿ ಕುರುಬ ಸಮುದಾಯ ಭವನ ಹಾಗೂ ವಸತಿ ನಿಲಯ ಕಾಮಗಾರಿ ವೀಕ್ಷಸಿ ಮತ್ತು ವಸತಿ ನಿಲಯದ ವಿದ್ಯಾರ್ಥಿಗಳ ಕುಶಲೋಪರಿ ವಿಚಾರಿಸಿ ಮಾತನಾಡಿದ ಅವರು, ಸಮುದಾಯವು ಸಾಮಾಜಿಕ, ಆರ್ಥಿಕವಾಗಿ ಸದೃಢವಾಗಲು ವಿದ್ಯೆ ಅವಶ್ಯಕವೆಂದರು.
         ಕುರುಬ ಸಮುದಾಯ ಭವನ ನಿರ್ಮಾಣವಾಗುತ್ತಿರುವುದು ಖುಷಿ ತಂದಿದೆ. ಭವನದಿಂದ ಬರುವ ಆದಾಯ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉಪಯೋಗವಾಗುತ್ತದೆ ಎಂದರು.
ಕುರುಬ ಸಮುದಾಯ ಭವನ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣದ ಅಂದಾಜು ವೆಚ್ಚ ೩ ಕೋಟಿ ರೂ. ಸರ್ಕಾರದಿಂದ ೧ ಕೋಟಿ ರೂ. ಈಗಾಗಲೇ ಮಂಜೂರಾಗಿದೆ. ಶೀಘ್ರವಾಗಿ ಹಣವನ್ನು ಬಿಡುಗಡೆ ಮಾಡಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಮನವಿ ಮಾಡಿದರು.
ಪ್ರತಿಕ್ರಿಯಿಸಿದ ಕೆ.ವಿ.ಪ್ರಭಾಕರ್ ಶೀಘ್ರವಾಗಿ ಹಣವನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಕೆಲಸವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕುರುಬರ ಸಂಘದ ನಿರ್ದೇಶಕ ಅಪ್ಪಯ್ಯ ಗೌಡ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ತಂಬಳ್ಳಿ ಮುನಿಯಪ್ಪ, ಬಂಗಾರಪೇಟೆ, ಕುರುಬ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣಪ್ಪ, ವಸತಿ ನಿಲಯದ ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!