ಉದಯವಾಹಿನಿ, ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ವಿತರಿಸಿ, ಹೊಸ ಸೂರಿನಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುವಂತೆ ಶುಭ ಹಾರೈಸಿದರು.
ಈ ವೇಳೆ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
