ಉದಯವಾಹಿನಿ, ಬೆಂಗಳೂರು: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರ ಹೊಸ ಆದೇಶದಿಂದಾಗಿ, ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಕುತ್ತು ಎದುರಾಗಿದೆ. ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯದ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಡಿಜಿಪಿ ಅಧಿಕಾರ ಬಳಸಿ ಅಲೋಕ್ ಕುಮಾರ್ ಅವರು ಹೊಸ ಸುತ್ತೋಲೆ ಹೊರಡಿಸಿದ್ದಾರೆ.
ಫುಡ್ ಮತ್ತು ಬೆಡ್ ಬಗ್ಗೆ ಹೊಸ ಆದೇಶ ಹೊರಬಿದ್ದಿದೆ. ಜೈಲಿನಲ್ಲಿ ಊಟದ ವ್ಯವಸ್ಥೆ ಮತ್ತು ಬೆಡ್ ವ್ಯವಸ್ಥೆ ಬಗ್ಗೆ ಆದೇಶ ಹೊರಡಿಸಲಾಗಿದೆ. ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತೆ. ಯಾವುದೇ ಹಾಸಿಗೆಯ ಸೌಲಭ್ಯ ಇರೋದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ಗೆ ಕುತ್ತು ಎದುರಾಗಲಿದೆ ಎಂದು ‘ಪಬ್ಲಿಕ್ ಟಿವಿ’ ವರದಿ ಬಿತ್ತರಿಸಿತ್ತು. ಅದರ ಬೆನ್ನಲ್ಲೇ ಡಿಜಿಪಿಯಿಂದ ಹೊಸ ಆದೇಶ ಬಂದಿದೆ. ಕೋರ್ಟ್ ಆದೇಶದ ಮೂಲಕ ದರ್ಶನ್ ಹೆಚ್ಚುವರಿ ಬ್ಲಾಂಕೆಟ್ ಪಡೆದಿದ್ದರು. ಜೈಲ್ ಮ್ಯಾನ್ಯೂಯಲ್ ಪ್ರಕಾರ ಹೆಚ್ಚುವರಿ ಸೌಲಭ್ಯ ಒದಗಿಸುವ ಅಧಿಕಾರ ಡಿಜಿಪಿಗೆ ಇರಲಿದೆ. ಈ ಅಧಿಕಾರ ಬಳಸಿ ಡಿಜಿಪಿ ಅಲೋಕ್ ಕುಮಾರ್ ಅವರು ಹೊಸ ಸುತ್ತೋಲೆ ಹೊರಡಿಸಿದ್ದಾರೆ.
