ಉದಯವಾಹಿನಿ, ನವದೆಹಲಿ: ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಈ ಹೊಡಿ ಬಡಿ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ. ತಮ್ಮ ತಮ್ಮ ನೆಚ್ಚಿನ ತಂಡಗಳು ಹಾಗೂ ತಮ್ಮ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಆ ಮೂಲಕ ಸಿಎಸ್‌ಕೆ ಪರ ಈ ಸೀಸನ್‌ ಆಡುವುದು ಖಚಿತವಾಗಿದೆ.

ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಎಂಎಸ್ ಧೋನಿ ತಮ್ಮ ಹಳದಿ ಪ್ಯಾಡ್‌ಗಳನ್ನು ಧರಿಸಿ ನಂತರ ಬ್ಯಾಟ್ ಹಿಡಿದು ಮಾತನಾಡುತ್ತಿರುವುದನ್ನು ಕಾಣಬಹುದು. “ಯಾರು ಹಿಂತಿರುಗಿದ್ದಾರೆ ನೋಡಿ, ಜೆಎಸ್‌ಸಿಎಯ ಹೆಮ್ಮೆ, ಮಹೇಂದ್ರ ಸಿಂಗ್ ಧೋನಿ.” ಎಂಬ ಶೀರ್ಷಿಕೆಯಲ್ಲಿ ಜೆಎಸ್‌ಸಿಎ ಹಾಕಿಕೊಂಡಿದೆ. 2026ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಮ್ಮ ಆರನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಲು ಎದುರು ನೋಡುತ್ತಿದೆ.ಕಳೆದ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳಲ್ಲಿ ಕೇವಲ ನಾಲ್ಕರಲ್ಲಿ ಗೆದ್ದು ಪಾಯಿಂಟ್ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿತ್ತು. ಎಂಎಸ್ ಧೋನಿ ಅವರ ಕಡೆಯಿಂದಲೂ ಹೇಳಿಕೊಳ್ಳುವ ಪ್ರದರ್ಶನ ಮೂಡಿ ಬಂದಿರಲಿಲ್ಲ. ಅವರು 13 ಇನಿಂಗ್ಸ್‌ಗಳಲ್ಲಿ 24.50ಎ ಸರಾಸರಿ ಮತ್ತು 135.17ರ ಸ್ಟ್ರೈಕ್ ರೇಟ್‌ನಲ್ಲಿ 196 ರನ್ ಗಳಿಸಿದ್ದರು. ಋತುರಾಜ್ ಗಾಯಕ್ವಾಡ್ ಗಾಯದ ನಂತರ, ಎಂಎಸ್‌ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!