ಉದಯವಾಹಿನಿ, ಮೈಸೂರು: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು.
ಸರ್ಕಾರ ಕೊಟ್ಟಿರುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿದ್ಯಮಾನಗಳ ಬಗ್ಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು.
