ಉದಯವಾಹಿನಿ , ನವದೆಹಲಿ: 2026ರ ಗಣರಾಜ್ಯೋತ್ಸವ‌ ಸಂಭ್ರಮದಂದು ದೇಶವು ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿ ʻಅಶೋಕ ಚಕ್ರʼವನ್ನ ಪ್ರದಾನ ಮಾಡಿದರು. ಬಾಹ್ಯಾಕಾಶದಲ್ಲಿ ಭಾರತದ (ಪತಾಕೆ ಹಾರಿಸಿದಂತಹ ಮಹತ್ತರ ಕೀರ್ತಿ ಶುಭಾಂಶು ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ʻಅಶೋಕ ಚಕ್ರʼ ಶ್ರೇಷ್ಠ ಗೌರವವನ್ನ ನೀಡಲಾಗಿದೆ. ಈ ಪ್ರಶಸ್ತಿಯು ಶುಕ್ಲಾ ಅವರು ರಾಷ್ಟ್ರಕ್ಕಾಗಿ ನೀಡಿದ ಅಪ್ರತಿಮ ಕೊಡುಗೆಯನ್ನ ಸ್ಮರಿಸುತ್ತದೆ.
ಶಾಂತಿಕಾಲದ ಶೌರ್ಯ ಪ್ರಶಸ್ತಿಯ ಮಹತ್ವ ಗೊತ್ತಾ?
ಅಶೋಕ ಚಕ್ರವು ಭಾರತದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾಗಿದೆ. ಯುದ್ಧಭೂಮಿಯ ಹೊರಗೆ ತೋರುವ ಅದ್ಭುತ ಸಾಹಸ, ಆತ್ಮತ್ಯಾಗ ಅಥವಾ ಧೈರ್ಯಕ್ಕಾಗಿ ಸೈನಿಕರು ಮತ್ತು ನಾಗರಿಕರಿಗೆ ನೀಡಲಾಗುತ್ತದೆ. ಇದು ಇದು ಅತ್ಯುನ್ನತ ಯುದ್ಧಕಾಲದ ಶೌರ್ಯ ಪ್ರಶಸ್ತಿಯಾದ ʻಪರಮವೀರ ಚಕ್ರʼಕ್ಕೆ ಸಮಾನವಾಗಿದೆ.

Leave a Reply

Your email address will not be published. Required fields are marked *

error: Content is protected !!