ಉದಯವಾಹಿನಿ , ನವದೆಹಲಿ: ಕರ್ನಾಟಕದ 8 ಮಂದಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದೆ. ಶತಾವಧಾನಿ ಗಣೇಶ್ ಅವರಿಗೆ ಕಲೆ ವಿಭಾಗದಲ್ಲಿ ಪದ್ಮಭೂಷಣ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟು 5 ಮಂದಿಗೆ ಪದ್ಮವಿಭೂಷಣ, 13 ಮಂದಿಗೆ ಪದ್ಮಭೂಷಣ, 113 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಕೇಂದ್ರ ಸರ್ಕಾರ ಘೋಷಿಸಿದೆ. ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪುಸ್ತಕ ಪ್ರೇಮಿ ಅಂಕೆ ಗೌಡ ಎಂ(ಸಮಾಜ ಸೇವೆ), ಅಲರ್ಜಿ ತಜ್ಞೆ ಡಾ.ಶುಭ ವೆಂಕಟೇಶ ಅಯ್ಯಂಗಾರ್ (ವಿಜ್ಞಾನ), ಟಿಟಿ ಜಗನ್ನಾಥನ್ (ಕೈಗಾರಿಕೆ), ಪ್ರಭಾಕರ ಕೋರೆ (ಶಿಕ್ಷಣ), ಎಸ್‌ಜಿ ಸುಶೀಲಮ್ಮ(ಸಮಾಜ ಸೇವೆ), ಶಶಿ ಶೇಖರ್ ವೆಂಪತಿ(ಶಿಕ್ಷಣ), ಸುರೇಶ್ ಹನಗವಾಡಿ (ವೈದ್ಯಕೀಯ) ಅವರು ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ನಟ ಮಮ್ಮುಟ್ಟಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ (ಮರಣೋತ್ತರ), ಅಡ್ಮನ್ ಪಿಯೂಷ್ ಪಾಂಡೆ (ಮರಣೋತ್ತರ), ಕೋಟಕ್ ಮಹೀಂದ್ರಾ ಬ್ಯಾಂಕ್ ಸಂಸ್ಥಾಪಕ ಉದಯ್ ಕೋಟಕ್, ಗಾಯಕಿ ಅಲ್ಕಾ ಯಾಗ್ನಿಕ್, ಮಾಜಿ ಟೆನಿಸ್ ಆಟಗಾರ ವಿಜಯ್ ಅಮೃತರಾಜ್, ಮಹಾರಾಷ್ಟ್ರದ ಮಾಜಿ ಗವರ್ನರ್ ಭಗತ್ ಸಿಂಗ್ ಕೋಶ್ಯಾರಿ ಸೇರಿದಂತೆ 13 ಮಂದಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ.
