ಉದಯವಾಹಿನಿ , : ಬಿಗ್ ಬಾಸ್ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿದ ಗಿಲ್ಲಿ ನಟರಾಜ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ಚನ್ನಪಟ್ಟಣದ ಬೊಂಬೆನಾಡು ಉತ್ಸವ ಕಾರ್ಯಕ್ರಮದಲ್ಲಿ ನಡೆದಿದೆ.
ಹಲವಾರು ಅಭಿಮಾನಿಗಳು ಗಿಲ್ಲಿ ಮಾತನಾಡುವಾಗ ವೇದಿಕೆ ಏರಿ ಶೇಕ್ ಹ್ಯಾಂಡ್‌ಗೆ ಮುಂದಾಗಿದ್ದಾರೆ. ಅಲ್ಲದೇ ಗಿಲ್ಲಿಯವರನ್ನು ನೋಡಿ ಅಭಿಮಾನಿಗಳ ಘೋಷಣೆ ಕೂಗಿದ್ದಾರೆ. ತಕ್ಷಣ ಅಭಿಮಾನಿಗಳನ್ನು ತಡೆದು ಪೊಲೀಸರು ವೇದಿಕೆಯಿಂದ ಕೆಳಗಿಳಿಸಿದ್ದಾರೆ. ಅಭಿಮಾನಿಗಳ ನಡೆಯಿಂದ ಕಾರ್ಯಕ್ರಮದಲ್ಲಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬಿಗ್ ಬಾಸ್ ಗೆದ್ದ ಗಿಲ್ಲಿ ನಟನಿಗೆ 50 ಲಕ್ಷ ರೂ., ಕಾರು ಹಾಗೂ ಸುದೀಪ್ ಅವರ ಕಡೆಯಿಂದ 10 ಲಕ್ಷ ರೂ. ಬಹುಮಾನ ಸಿಕ್ಕಿದೆ. ಗಿಲ್ಲಿ ವಿನ್ ಆಗ್ತಿದ್ದಂತೆ ತವರಲ್ಲಿ ಸಂಭ್ರಮಾಚರಣೆ ಜೋರಾಗಿ ನಡೆದಿತ್ತು. ಇನ್ನೂ ಸಹ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಾಸಕ ಸಿ.ಪಿ ಯೋಗೇಶ್ವರ್ ಅವರ ನೇತೃತ್ವದಲ್ಲಿ ‘ಬೊಂಬೆನಾಡು ಗಂಗೋತ್ಸವ’ ಕಾರ್ಯಕ್ರಮಆಯೋಜಿಸಲಾಗಿತ್ತು. ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ಹಾಗೂ ಸಂಸ್ಕೃತಿ ಮತ್ತು ಪರಂಪರೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
