ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ರಾಜಭವನ ಚಲೋ ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಈ ವಿಚಾರವಾಗಿ ನಮಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧಿ ಅವರ ಹೆಸರನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಕೆಲಸ ಮಾಡಲಾಗುವುದು. ಹಳ್ಳಿಗೊಂದು ಶಾಲೆ, ಸಹಕಾರ ಸಂಘ, ಪಂಚಾಯ್ತಿ ಇರಬೇಕು ಎಂಬುದು ಗಾಂಧೀಜಿ ಅವರ ಸಂಕಲ್ಪ ಎಂದು ಹೇಳಿದರು.

ಬಡ ಜನರ ಉದ್ಯೋಗದ ಹಕ್ಕಿನ ಪರವಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಉದ್ಯೋಗ ಇಲ್ಲದವರಿಗೆ ಉದ್ಯೋಗ ನೀಡಿದ್ದು, ಸೋನಿಯಾ ಗಾಂಧಿ ಅವರ ನೇತೃತ್ವದ ಮನಮೋಹನ್ ಸಿಂಗ್ ಅವರ ಸರ್ಕಾರ. ನಮ್ಮ ಉದ್ಯೋಗ ಖಾತರಿ ಯೋಜನೆಯನ್ನು ವಿಶ್ವವೇ ಗಮನಿಸಿತ್ತು. ಈ ಯೋಜನೆ ಬಹಳ ಅತ್ಯುತ್ತಮ ಯೋಜನೆ ಎಂದು ವಿಶ್ವಬ್ಯಾಂಕ್ 2013ರಲ್ಲಿ ಶ್ಲಾಘಿಸಿತ್ತು. 5700 ಪಂಚಾಯಿತಿಗಳಿದ್ದು, ಪ್ರತಿ ವರ್ಷ ನಮ್ಮ ರಾಜ್ಯದಲ್ಲಿ ಈ ಯೋಜನೆಯಿಂದ 6 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿತ್ತು ಎಂದರು.

Leave a Reply

Your email address will not be published. Required fields are marked *

error: Content is protected !!