ಉದಯವಾಹಿನಿ, ಹೈದರಾಬಾದ್: ಐದು ವರ್ಷದ ಬಾಲಕಿಯ ಕುತ್ತಿಗೆಗೆ ಚೈನೀಸ್ ಮಾಂಜಾ ಎಂಬ ಚೂಪಾದ ನೈಲಾನ್ ಗಾಳಿಪಟದ ದಾರ ಸಿಲುಕಿಕೊಂಡ ಪರಿಣಾಮ ಆಕೆ ದುರಂತವಾಗಿ ಸಾವಿಗೀಡಾದ ಘಟನೆ ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಕುಕತ್ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಿಶ್ವಿಕಾ ಆದಿತ್ಯ (5) ಎಂದು ಗುರುತಿಸಲಾದ ಮಗು ಮೃತ ದುರ್ದೈವಿ.
ವಿವೇಕಾನಂದ ನಗರದ ಬಳಿ ಮಗು ತನ್ನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬಾಲಕಿಯು ಇದ್ದಕ್ಕಿದ್ದಂತೆ ಕಿರುಚಿದಳು.
ಇದರಿಂದಾಗಿ ಆಕೆಯ ತಂದೆ ವಾಹನವನ್ನು ನಿಲ್ಲಿಸಿದರು. ನೈಲಾನ್ ದಾರವು ಆಕೆಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದ್ದು, ತೀವ್ರ ರಕ್ತಸ್ರಾವವಾಗುತ್ತಿರುವುದನ್ನು ಅವರು ಗಮನಿಸಿದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿ ವರ್ಷ ದೇಶದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಘಟನೆಗಳು ವರದಿಯಾಗುತ್ತಿರುತ್ತವೆ. ಮಕರ ಸಂಕ್ರಾಂತಿ ಮರುದಿನ ಗಾಳಿಪಟ ದಾರ ಸಿಲುಕಿ ಮಕ್ಕಳು ಮೃತಪಟ್ಟ ಅನೇಕ ಘಟನೆ ವರದಿಯಾಗಿತ್ತು. ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಾಜಸ್ಥಾನದ ಏಳು ಜನರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಮೃತರು ಪಾಲಿ ಮತ್ತು ಸಿರೋಹಿ ಜಿಲ್ಲೆಯವರು. ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದ್ದ ಟ್ರಕ್ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಸಂತಾಪ ಸೂಚಿಸಿದ್ದಾರೆ.
