ಉದಯವಾಹಿನಿ, ಕೊಪ್ಪಳ: ಹೃದಯಾಘಾತಕ್ಕೆ 18ರ ಯುವತಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕೂಕನೂರ ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ನಡೆದಿದೆ. ಕಾವ್ಯಾ ಚಲವಾದಿ (18) ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ (ಜ.27) ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
