
ಉದಯವಾಹಿನಿ, ಔರಾದ್ :ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.31 ರಂದು ಸೋಮವಾರ ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯತ ಸಭಾ ಭವನದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯಸಾನಿಧ್ಯ ವಹಿಸುವರು. ಭಾಲ್ಕಿ ಶ್ರೀಗಳಾದ ಗುರುಬಸವ ಪಟ್ಟದ್ದೇವರು ದಿವ್ಯ ನೇತೃತ್ವ ವಹಿಸುವರು. ಶಾಸಕ ಪ್ರಭು ಚವ್ಹಾಣ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಡಿಕೆ ಗಣಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಲಬುರಗಿಯ ಪತ್ರಕರ್ತ ವಿಶ್ವರಾಧ್ಯ ಎಸ್.ಹಂಗನಳ್ಳಿ ಅವರಿಂದ ಉಪನ್ಯಾಸ ಜರುಗಲಿದೆ. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ನಾಗಶೆಟ್ಟಿ ಧರ್ಮಪುರೆ, ಜಿಲ್ಲಾ ಕಾರ್ಯದರ್ಶಿ ಪೃಥ್ವಿರಾಜ್, ಸುನಿಲ ಕುಲಕರ್ಣಿ, ತಾಪಂ ಇಒ ಬಿರೇಂದ್ರಸಿಂಗ್ ಠಾಕೂರ್, ಕಮಲನಗರ ತಾಪಂ ಇಒ ಶಿವಕುಮಾರ ಘಾಟೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಾಲೂಕಿನ ಸಂಘ ಸಂಸ್ಥೆಯವರು, ಸಮಾಜಿಕ ಕಾರ್ಯಕರ್ತರು, ಪತ್ರಿಕಾ ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಮೊಕ್ತೆದಾರ್ ಮನವಿ ಮಾಡಿದ್ದಾರೆ.
