
ಉದಯವಾಹಿನಿ ಕುಶಾಲನಗರ:- ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಕೊಡಗು ಜಿಲ್ಲೆ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜ್ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಬೆಂಗೂರು ಚೇರಂಬಾಣೆ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಪೊನ್ನಣ್ಣ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಪೊಲೀಸ್ ಉನ್ನತ ಅಧಿಕಾರಿ ರಾಮರಾಜ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳ ತಂಡವೇ ಹಾಜರಿದ್ದು ಪರಿಸ್ಥಿತಿಯನ್ನು ಕಂದಾಯ ಸಚಿವರಿಗೆ ಮನದಟ್ಟು ಮಾಡಿದರು
