ಉದಯವಾಹಿನಿ, ಕಲ್ಕಿ 2898 AD ಚಿತ್ರದಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಸೇರಿದಂತೆ ದೊಡ್ಡ ಸ್ಟಾರ್ ನಟರೇ ಪ್ರಮುಖ ಪಾತ್ರಗಳಲ್ಲಿ ಗಮನ ಸೆಳೆದಿದ್ದರು. ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸಿ, ಎರಡನೇ ಭಾಗಕ್ಕೆ ನಿರೀಕ್ಷೆ ಹೆಚ್ಚಿಸಿದ್ದರು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದೀಪಿಕಾ ಪಡುಕೋಣೆ ಕಲ್ಕಿ 2 ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಅಂತ ನಿರ್ಮಾಪಕರು ಘೋಷಿಸಿದ್ದರು. ಈ ಘೋಷಣೆಯ ನಂತರ, ಹೊಸ ನಾಯಕಿಯ ಆಯ್ಕೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.
ಇತ್ತೀಚಿನ ವರದಿಗಳ ಪ್ರಕಾರ, ದೀಪಿಕಾ ಬದಲಾಗಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ. ಅಧಿಕೃತ ಪ್ರಕಟಣೆ ಇನ್ನೂ ಬಂದಿಲ್ಲ. ಆದರೆ ರೆಡ್ಡಿಟ್ ಮತ್ತು ಇತರ ಫೋರಂಗಳಲ್ಲಿ ಅಭಿಮಾನಿಗಳು ಈ ಮಾಹಿತಿಯನ್ನು ಚರ್ಚಿಸುತ್ತಿದ್ದಾರೆ.
ಚಿತ್ರದಲ್ಲಿ ಸಾಯಿ ಪಲ್ಲವಿ ಮಗುವನ್ನು ದುಷ್ಟ ಶಕ್ತಿಗಳ ವಿರುದ್ಧ ಹೋರಾಡುವ ಯೋಧನಾಗಿ ಬೆಳೆಸುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ಈ ಪಾತ್ರದ ಮೂಲಕ ಕಥೆಯನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸಾಯಿ ಪಲ್ಲವಿ ಈಗಾಗಲೇ ಹಲವಾರು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮೇ 2026 ರಲ್ಲಿ ಬಿಡುಗಡೆಯಾಗಲಿರುವ ಏಕ್ ದಿನ್ ಚಿತ್ರದಿಂದ ಬಾಲಿವುಡ್‌ನಲ್ಲಿ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!