ಉದಯವಾಹಿನಿ , ಬೆಂಗಳೂರು: ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಸಿ.ಜೆ ರಾಯ್ ಕುರಿತು ಅನೇಕ ಸಂಗತಿಗಳು ಹೊರಬೀಳುತ್ತಿವೆ.
ಹೌದು. ಕಾನ್ಫಿಡೆಂಟ್ ಗ್ರೂಪ್ ಕೇವಲ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಸೀಮಿತವಾಗಿರಲಿಲ್ಲ. ಸಿ.ಜೆ ರಾಯ್ ಅವರ ಬಹುಮುಖ ಪ್ರತಿಭೆ ಮತ್ತು ಆಸಕ್ತಿಗಳು ಸಂಸ್ಥೆಯನ್ನ ವಿವಿಧ ಕ್ಷೇತ್ರಗಳಲ್ಲಿ ವಿಸ್ತರಿಸಲು ಕಾರಣವಾಗಿತ್ತು. ಸಿನಿ ರಂಗದೊಂದಿಗೂ ಅಪಾರ ನಂಟು ಹೊಂದಿದ್ದ ಉದ್ಯಮಿ, ಮಲಯಾಳಂ ಮತ್ತು ಕನ್ನಡದಲ್ಲಿ 11 ಚಿತ್ರಗಳನ್ನ ನಿರ್ಮಿಸಿದ್ದಾರೆ. ಮರಕ್ಕಾರ್’ ಎಂಬ ಅತಿ ದೊಡ್ಡ ಬಜೆಟ್‌ನ ಮಲಯಾಳಂ ಚಿತ್ರವನ್ನು ಸಹ ನಿರ್ಮಿಸಿದ್ದಾರೆ. 2006 ರಲ್ಲಿ, ‘ಐಡಿಯಾ ಸ್ಟಾರ್ ಸಿಂಗರ್’ ಎಂಬ ಜನಪ್ರಿಯ ಟಿವಿ ಕಾರ್ಯಕ್ರಮಕ್ಕೆ ಹಣಕಾಸು ಒದಗಿಸುವ ಮೂಲಕ ಕಾನ್ಫಿಡೆಂಟ್ ಗ್ರೂಪ್ ಅನ್ನು ಪ್ರಚಾರ ಮಾಡುವ ಅವರ ಆಲೋಚನೆ ಯಶಸ್ವಿಯಾಗಿತ್ತು. ದಿವಂಗತರಾದ ಡಾ. ರಾಜ್ ಕುಮಾರ್, ಪುನೀತ್ ರಾಜ್‌ಕುಮಾರ್ ಅರೊಂದಿಗೂ ಗುರುತಿಸಿಕೊಂಡಿದ್ದರು. ದಿಗ್ಗಜ ನಟ ಮೋಹನ್ ಲಾಲ್ ಅವರ ಸಿನಿಮಾವನ್ನೂ ನಿರ್ಮಿಸಿದ್ದರು.
