ಉದಯವಾಹಿನಿ, ಮೈಸೂರು : ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಮಗು ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿಯಲ್ಲಿ ನಡೆದಿದೆ. ಮಹದೇವಸ್ವಾಮಿ ಎಂಬುವವರು ಪತ್ನಿ, ಮಗು ಜತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಈ ವೇಳೆ ದಂಪತಿ, ಮಗು ಬೈಕ್‌ನಿಂದ ಕೆಳಗೆ ಬಿದ್ದಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಗಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!