ಉದಯವಾಹಿನಿ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಸೇನಾ ಪಡೆ ಬಂಧಿಸಿದ ಬಳಿಕ ಮೊದಲ ಬಾರಿಗೆ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಎರಡು ರಾಷ್ಟ್ರಗಳ ನಡುವೆ ಬಹುಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸಲು ಮತ್ತು ವಿಸ್ತರಿಸಲು ಚರ್ಚೆ ನಡೆಸಿದ್ದಾರೆ.ಜನವರಿ ೩ರಂದು ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ವೈಮಾನಿಕ ದಾಳಿ ನಡೆಸಿದ ಅಮೇರಿಕ ಸೇನಾ ಪದೇ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ವಶಕ್ಕೆ ಪಡೆದಿತ್ತು.
ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಜೊತೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ವಶಕ್ಕೆ ತೆಗೆದುಕೊಂಡು ನ್ಯೂಯಾರ್ಕ್ ಗೆ ಕರೆ ತರಲಾಗಿತ್ತು. ಮಾದಕ ವಸ್ತು ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆಗೆ ವೆನೆಜುವೆಲಾ ಸಹಕಾರ ನೀಡುತ್ತಿದೆ ಎನ್ನುವ ಆರೋಪದಲ್ಲಿ ವೆನುಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ಅಮೆರಿಕ ಈ ದಾಳಿ ನಡೆಸಿತ್ತು
