ಉದಯವಾಹಿನಿ, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಐದನೇ ಹಾಗೂ ಕೊನೆಯ ಟಿ20 ಪಂದ್ಯಕ್ಕೆ ತಿರುವನಂತಪುರದ ಗ್ರೀನ್‌ಫೀಲ್ಡ್ ಮೈದಾನ ಸಜ್ಜಾಗಿದೆ. ಈ ಪಂದ್ಯವು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಂಜು ಸ್ಯಾಟ್ಸನ್ ಪಾಲಿಗೆ ಅತ್ಯಂತ ಮಹತ್ವದ್ದಾಗಿ ಪರಿಣಮಿಸಿದೆ. ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದರೂ ಸ್ಯಾಟ್ಸನ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ.
ಮೊದಲ ಪಂದ್ಯದಲ್ಲಿ 10 ರನ್, ಎರಡನೇ ಪಂದ್ಯದಲ್ಲಿ 6 ರನ್, ಮೂರನೇ ಪಂದ್ಯದಲ್ಲಿ ಶೂನ್ಯ ಮತ್ತು ನಾಲ್ಕನೇ ಪಂದ್ಯದಲ್ಲಿ 24 ರನ್ ಗಳಿಸಿದ ಸ್ಯಾಮ್ಪನ್, ನಾಲ್ಕು ಇನಿಂಗ್ಸ್‌ಗಳಲ್ಲಿ ಒಟ್ಟಾರೆ ಕೇವಲ 40 ರನ್ ಮಾತ್ರ ಕಲೆಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಐದನೇ ಪಂದ್ಯವನ್ನು ಅವರ ‘ಮಾಡು ಇಲ್ಲವೇ ಮಡಿ’ ಪಂದ್ಯವೆಂದು ನೋಡಲಾಗುತ್ತಿದೆ. ಇಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಟಿ20 ವಿಶ್ವಕಪ್‌ಗೆ ಆರಂಭಿಕನಾಗಿ ತಮ್ಮ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ಇದೆ.
