ಉದಯವಾಹಿನಿ, ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ್ತಿ ನಾಡಿನ್ ಡಿ ಕ್ಲರ್ಕ್ ಅಸಾಧಾರಣ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಪರ ಒಂದೇ ಸೀಸನ್‌ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.
ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಡಬ್ಲ್ಯುಪಿಎಲ್‌ನ 18ನೇ ಪಂದ್ಯದಲ್ಲಿ ನಾಡಿನ್ ನಾಲ್ಕು ಓವರ್‌ಗಳಲ್ಲಿ ಕೇವಲ 22 ರನ್ ನೀಡಿದರು. ಇದರೊಂದಿಗೆ ಯುಪಿ ವಾರಿಯರ್ಸ್ ತಂಡದ ನಾಲ್ವರು ಪ್ರಮುಖ ಬ್ಯಾಟರ್‌ಗಳನ್ನು ಔಟ್ ಮಾಡಿ ಪಂದ್ಯಕ್ಕೆ ತಿರುವು ನೀಡಿದರು. ಈ ಪ್ರದರ್ಶನದೊಂದಿಗೆ ಈ ಸೀಸನ್‌ನಲ್ಲಿ ಅವರ ಒಟ್ಟು ವಿಕೆಟ್ ಸಂಖ್ಯೆ 15ಕ್ಕೆ ಏರಿಕೆಯಾಯಿತು.
