ಉದಯವಾಹಿನಿ, ಹುಬ್ಬಳ್ಳಿ: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ ಆರೋಪವನ್ನ ತಳ್ಳಿಹಾಕಿದ್ದಾರೆ.

2026-27ರ ಬಜೆಟ್ ಪ್ರಕಾರ, ಕರ್ನಾಟಕಕ್ಕೆ 63,049 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚೇ ತೆರಿಗೆ ಪಾಲು ರಾಜ್ಯಕ್ಕೆ ದೊರಕಲಿದೆ. 16ನೇ ಹಣಕಾಸು ಆಯೋಗದ ವರದಿಯು ರಾಜ್ಯಗಳ ತೆರಿಗೆ ಹಂಚಿಕೆಯನ್ನ ಶೇ.41 ರಲ್ಲಿಯೇ ಉಳಿಸಿಕೊಂಡಿದೆ. ತೆರಿಗೆ ಹಂಚಿಕೆಗಳಲ್ಲಿ ಬದಲಾವಣೆ ಇಲ್ಲದಿದ್ದರೂ ರಾಜ್ಯಗಳ ತೆರಿಗೆ ಹಂಚಿಕೆ ಪಾಲು ಬದಲಾಗಿದೆ. ಆ ಪ್ರಕಾರ ರಾಜ್ಯಗಳಿಗೆ ಹೆಚ್ಚೇ ತೆರಿಗೆ ಪಾಲು ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!