ಉದಯವಾಹಿನಿ, ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ.
ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಪಂಕಜ್ ಕುಮಾರ್ ಪಾಂಡೆ ಅವರು ಡಾ. ಮನೋಹರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

error: Content is protected !!