ಉದಯವಾಹಿನಿ, ಇಂದೋರ್: ಹಸುವಿನ ಮೇಲೆ ಕಿಡಿಗೇಡಿಯೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. ಇದರ ವಿಡಿಯೊ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಉಂಟಾಗಿದೆ. ಹಸುವಿನ ಮೇಲಿನ ಅತ್ಯಾಚಾರದಿಂದ ಕೋಪಗೊಂಡ ಸ್ಥಳೀಯರು ಅಂಗಡಿಗಳು, ವಾಹನಗಳು ಮತ್ತು ಮನೆಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ.
ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ, ವಶಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ಆದ ವಿಡಿಯೊದ ಬಗ್ಗೆ ಹಿಂದೂ ಸಂಘಟನೆಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ನಂತರ ದಾಮ್ಜಿಪುರದಲ್ಲಿ ಉದ್ವಿಗ್ನತೆ ಆರಂಭವಾಯಿತು. ಅತ್ಯಾಚಾರಕ್ಕೊಳಗಾದ ಹಸುವು ಆರೋಪಿ ಅಬು ಖಾನ್‌ಗೆ ಸೇರಿದ್ದು, ವಿಚಾರ ತಿಳಿಯುತ್ತಿದ್ದಂತೆ ಉದ್ವಿಗ್ನತೆ ಉಂಟಾಗಿ ಹಿಂಸಾಚಾರಕ್ಕೆ ಕಾರಣವಾಯಿತು. ಸ್ಥಳೀಯರು ಆರೋಪಿಗೆ ಸಂಬಂಧಪಟ್ಟ ಪಂಕ್ಚರ್ ರಿಪೇರಿ ಅಂಗಡಿಗೆ ಬೆಂಕಿ ಹಚ್ಚಿದರು. ಸಿಟ್ಟಿಗೆದ್ದ ಸ್ಥಳೀಯರು ಏಳು ಅಂಗಡಿಗಳು, ನಾಲ್ಕು ಕಾರುಗಳು, ನಾಲ್ಕು ಬೈಕ್‌ಗಳು ಮತ್ತು ಒಂದು ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
