
ಉದಯವಾಹಿನಿ , ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ. ಉಮೇಶ್ ಕೊಟ್ಟಲಗಿ ತನ್ನ ಪತ್ನಿಯ ತಲೆ ಬೋಳಿಸಿದ ವ್ಯಕ್ತಿ. ಆರೋಪಿಯನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಪತ್ನಿ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿದ್ದ. ಪತ್ನಿಗೆ ಕಬ್ಬು ಕಡಿಯುವ ಕೊಯ್ತಾ ತೋರಿಸಿ ಬೆದರಿಕೆ ಹಾಕಿದ್ದ. ಬಳಿಕ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾನೆ.
